ಭ್ರಷ್ಟಾಚಾರ ಆರೋಪ: ಕಾಂಗ್ರೆಸ್ ಗೆ ಬಿ. ವೈ ವಿಜಯೇಂದ್ರ ತಿರುಗೇಟು ನೀಡಿದ್ದು ಹೀಗೆ……

ಬೆಂಗಳೂರು, ಆಗಸ್ಟ್, 26, 2020(www.justkannada.in) ; ತಮ್ಮ ವಿರುದ್ದ ಭ್ರಷ್ಟಾಚಾರ ಆರೋಪ ಮಾಡಿರುವ ಕಾಂಗ್ರೆಸ್ ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಕಟ್ಟು ಕಥೆ ಕಟ್ಟುವುದರಲ್ಲಿ, ಹಸಿ ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ಎತ್ತಿದ ಕೈ ಎಂದು ಟ್ವೀಟ್ ಮಾಡಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ  ಟಾಂಗ್ ನೀಡಿದ್ದಾರೆ.

jk-logo-justkannada-logo

ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾಡಿದ ಆರೋಪ ಸಂಬಂಧಿಸಿದಂತೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ವಿಜೆಯೇಂದ್ರ, ನನ್ನನ್ನು ಗುರಿಯಾಗಿಸಿಕೊಂಡು ಜೊಳ್ಳು ಆರೋಪ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.storysaidraisedlieb-y-vijayendra

ಮೈಸೂರಿನಲ್ಲಿಂದು ಹಾಸ್ಯಾಸ್ಪದ ಜೊಳ್ಳು ಆರೋಪ ಮಾಡಲಾಗಿದೆ. ದುರುದ್ದೇಶ ಪೂರಿತ ಆರೋಪಗಳಿಗೆ ನಾನು ಬೆನ್ನು ತೋರಲ್ಲ ಎಂದು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

key words ; story-said-raised-lie-B.Y.Vijayendra