ನವದೆಹಲಿ,ಅಕ್ಟೋಬರ್,27,2025 (www.justkannada.in): ದೇಶಾದ್ಯಂತ ಬೀದಿನಾಯಿಗಳ ಹಾವಳಿ ಹೆಚ್ಜಾಗಿದ್ದು, ಈ ಹಿನ್ನೆಲೆಯಲ್ಲಿ ಈವರೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಎಲ್ಲಾ ರಾಜ್ಯಗಳಿಂದಲೂ ಬೀದಿ ನಾಯಿಗಳ ದಾಳಿ ಬಗ್ಗೆ ವರದಿಗಳು, ದೂರುಗಳು ಬರುತ್ತಿವೆ. ಬೀದಿನಾಯಿಗಳ ಕಡಿವಾಣಕ್ಕೆ ಏನೆಲ್ಲಾ ಕ್ರಮ ಕೈಗೊಂಡಿದ್ದೀರಿ? ವರದಿಗಳನ್ನ ನೀಡಬೇಕು ಎಂದು ಎಲ್ಲಾ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಬೀದಿನಾಯಿಗಳ ಹಾವಳಿ ತಡೆಗಟ್ಟಲು ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಈ ಬಗ್ಗೆ ಮಾಹಿತಿ ನೀಡಿ ಮುಂದಿನ ವಿಚಾರಣೆಯಲ್ಲಿ ಹಾಜರಾಗುವಂತೆ ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
Key words: Street dog, Supreme Court, notice, state governments







