ದೇಶದ್ರೋಹಿಗಳ ವಿರುದ್ದ ಕಠಿಣ ಕ್ರಮ ನಿಶ್ಚಿತ- ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಹೇಳಿಕೆ…

ಕೊಡಗು,ಫೆ,23,2020(www.justkannada.in):  ಪಾಕಿಸ್ತಾನ ಪರ ಅಮೂಲ್ಯ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ, ದೇಶದ್ರೋಹಿಗಳ ವಿರುದ್ದ ಕಠಿಣ ಕ್ರಮ ನಿಶ್ಚಿತ ಎಂದು ಹೇಳಿದ್ದಾರೆ.

ಕೊಡಗು ಜಿಲ್ಲೆ  ಆಲೂರು ಸಿದ್ದಾಪುರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ದೇಶದ್ರೋಹಿಗಳ ವಿರುದ್ದ ನಿಶ್ಚಿತವಾಗಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಕಾರ್ಯಕ್ರಮ ಆಯೋಜಕರನ್ನ ತನಿಖೆಗೆ ಒಳಪಡಿಸಬೇಕು. ಇಂತಹ ಘಟನೆ ಬೆಳವಣಿಗೆಯನ್ನ ಬಿಡಲ್ಲ. ಮಟ್ಟ ಹಾಕುತ್ತೇವೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡರು ತಿಳಿಸಿದರು.

Key words: Strict action –against- traitors  – Union Minister -DV Sadananda Gowda