Friday, August 21, 2026

BDA Apartments

Home Crime ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ  ಶರಣು.

ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ  ಶರಣು.

ನೆಲಮಂಗಲ, ಜನವರಿ,4,2024(www.justkannada.in): ಎದೆ ಭಾಗಕ್ಕೆ ಗುಂಡು ಹಾರಿಸಿಕೊಂಡು  ಬಿಇ ವಿದ್ಯಾರ್ಥಿ  ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಉತ್ತರ ತಾಲೂಕಿನ ಭವಾನಿನಗರದಲ್ಲಿ ಈ ಘಟನೆ  ನಡೆದಿದೆ. ವಿಶು ಉತ್ತಪ್ಪ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. 8ನೇ ಮೈಲಿ ಖಾಸಗಿ ಕಾಲೇಜಿನಲ್ಲಿ ಬಿಇ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ.

ತಂದೆ ರೇಷನ್​ ತರಲು ಹೋದಾಗ ವಿಶು ಉತ್ತಪ್ಪ ಗನ್​​​ ನಿಂದ​  ಎದೆಗೆ ಗುಂಡು ಹಾರಿಸಿಕೊಂಡು ತಂದೆಗೆ ಕರೆ ಮಾಡಿದ್ದಾನೆ. ನಾನು ಇನ್ನು ಮುಂದೆ ತಪ್ಪು ಮಾಡುವುದಿಲ್ಲ ಎಂದು ಹೇಳಿದ್ದಾನೆ. ಗಾಬರಿಗೊಂಡ ತಂದೆ ಮನೆಗೆ ದೌಡಾಯಿಸಿ ಬಂದು ನೋಡಿದಾಗ ವಿಶು ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ವಿಶು ಉತ್ತಮ ಮೃತಪಟ್ಟಿದ್ದಾನೆ.

ಕೊಡಗು ಮೂಲದ ತಮ್ಮಯ್ಯ ಎಂಬವರು ನೈಸ್​ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದರು.  ಕಳೆದ 15 ವರ್ಷದಿಂದ ಭವಾನಿನಗರದಲ್ಲಿ ಕುಟುಂಬ ಸಹಿತ ವಾಸವಿದ್ದರು. ಮಾದನಾಯಕನಹಳ್ಳಿ ಪೊಲೀಸ್​ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Key words: student-committed -suicide –firing-himself