ಶಿಕ್ಷಕರು ಬೈದಿದ್ದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ…

ಬೆಂಗಳೂರು,ಡಿ,12,2019(www.justkannada.in): ಶಿಕ್ಷಕರು ಬೈದಿದ್ದಕ್ಕೆ ವಿದ್ಯಾರ್ಥಿಯೋರ್ವ  ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ದೊಮ್ಮಲೂರು ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ವೇಣುಗೋಪಾಲ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಶಾಲೆಯಲ್ಲಿ ಗಲಾಟೆ ನಡೆದಿತ್ತು. ಈ ವೇಳೆ  ವೇಣುಗೋಪಾಲ್ ಸಹಪಾಠಿಗೆ ಚಾಕು ತೋರಿಸಿ ಹೆದರಿಸಿದ್ದ. ಹೀಗಾಗಿ ವೇಣುಗೋಪಾಲ್ ಗೆ ಪೋಷಕರನ್ನ ಕರೆದುಕೊಂಡು ಬರುವಂತೆ ಶಿಕ್ಷಕರು ಸೂಚಿಸಿದ್ದರು.

ಇದರಿಂದ ವಿದ್ಯಾರ್ಥಿ ವೇಣುಗೋಪಾಲ್ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಶಾಲೆಯ ಆಡಳಿತ ಮಂಡಳಿ ಶಾಲೆಗೆ ರಜೆ ಘೋಷಣೆ ಮಾಡಿದೆ.

Key words: student – committed suicide -hanging – teachers- Abuse