ಬಳ್ಳಾರಿ ,ಜುಲೈ,15,2025 (www.justkannada.in): ಶಾಲೆಗೆ ತೆರಳುವಾಗಲೇ 6ನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿತ್ತಿರುವವವರ ಸಂಖ್ಯೆ ಏರುತ್ತಲೇ ಇದ್ದು ಈ ಮಧ್ಯೆ ಶಾಲೆಗೆ ತೆರಳುತ್ತಿರುವಾಗಲೇ ಕುಸಿದು ಬಿದ್ದು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ.
ಕಾಳಂಗೇರಿಯ ದೀಕ್ಷಾ (12) ಮೃತ ಬಾಲಕಿ. ಈಗೆ 6ನೇ ತರಗತಿಯಲ್ಲಿ ಓದುತ್ತಿದ್ದು, ಇಂದು ಎಂದಿನಂತೆ ಶಾಲೆಗೆ ತೆರಳುತ್ತಿದ್ದಳು . ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದ ಬಾಲಕಿ ದೀಕ್ಷಾಳನ್ನ ಕೂಡಲೇ ಕುಟುಂಬಸ್ಥರು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಮುಂದಾದರು. ಆದರೆ ಮಾರ್ಗ ಮಧ್ಯೆಯೇ ದೀಕ್ಷಾ ಮೃತಪಟ್ಟಿದ್ದಾಳೆ. ದೀಕ್ಷಾ ಸಾವಿನ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ. ದೀಕ್ಷಾ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನೆ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: student, died , school, Ballari