ಗುಂಡ್ಲುಪೇಟೆ,ಆಗಸ್ಟ್,9,2023(www.justkannada.in): ಪ್ರಾರ್ಥನೆ ಮಾಡುವ ಸಂದರ್ಭದಲ್ಲಿ ಹೃದಯಾಘಾತದಿಂದ ವಿಧ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಸಿಎಂಐ ಕ್ರಿಶ್ಚಿಯನ್ ಹಾಸ್ಟೆಲ್ ನಲ್ಲಿ ನಡೆದಿದೆ.![]()
ಬೆಂಗಳೂರು ಮೂಲದ ಫೆಲಿಶಾ(17) ಮೃತ ಬಾಲಕಿ. ಸಿಎಂಐ ಹಾಸ್ಟೆಲ್ ನಲ್ಲಿದ್ದುಕೊಂಡು ನಿರ್ಮಲಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೆಲಿಶಾ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ನಡುವೆ ಚರ್ಚ್ ನಲ್ಲಿ ಪ್ರಾರ್ಥನೆ ಸಮಯದಲ್ಲಿ ಫೆಲಿಶಾ ಕುಸಿದು ಬಿದ್ದಿದ್ದು ತಕ್ಷಣ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ ದಾಖಲು ಮಾಡಲಾಗಿತ್ತು.
ಆದರೆ ವಿದ್ಯಾರ್ಥಿನಿ ಫೆಲಿಶಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ವಿದ್ಯಾರ್ಥಿನಿ ಶವ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿಡಲಾಗಿದೆ.
Key words: Student -died – heart attack – praying.







