Tuesday, September 22, 2026

BDA Apartments

Home Crime ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು, ಆಗಸ್ಟ್,8,2026 (www.justkannada.in):  ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡು, ಕಳೆದ ಗುರುವಾರ (ಆ.6) ಮೃತಪಟ್ಟ ವಿದ್ಯಾರ್ಥಿನಿ ಮಾನಸ ಅವರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ನೀಡಲಾಗಿದೆ.

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ರೂ. ಹಾಗೂ ಚಿಕಿತ್ಸಾ ವೆಚ್ಚವಾಗಿ ಬೆಂಗಳೂರು ವಿಶ್ವವಿದ್ಯಾಲಯದಿಂದ 7 ಲಕ್ಷ ರೂ. ಸೇರಿದಂತೆ ಒಟ್ಟು 10 ಲಕ್ಷ ರೂ. ವಿದ್ಯಾರ್ಥಿನಿಯ ಪೋಷಕರಿಗೆ ನೀಡಲಾಗಿದೆ.

ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಾನಸ (23) ಅವರು ಬೆಂಗಳೂರು ವಿಶ್ವವಿದ್ಯಾಲಯದ ದೃಶ್ಯ ಕಲಾ ವಿಭಾಗದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು. ಜುಲೈ 30 ರಂದು ಜ್ಞಾನಭಾರತಿ ಕ್ಯಾಂಪಸ್‌ ನ ಗಾಂಧಿ ಮಾರ್ಗದ ಕ್ಯಾಂಟೀನ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಆಟೋರಿಕ್ಷಾ ಮಾನಸ ಅವರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಸರ್ಕಾರದಿಂದ 10 ಲಕ್ಷ ರೂ. ಪರಿಹಾರ jk02_...

ವಿದ್ಯಾರ್ಥಿನಿಯ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿ, ಸಂಕಷ್ಟದಲ್ಲಿರುವ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಪರಿಹಾರ ಒದಗಿಸಿದೆ.

Key words: Jnanabharati, student, dies, road accident, Government, Rs 10 lakh, compensation