ಪಾಠ ಕೇಳುವಾಗಲೇ 4ನೇ ತರಗತಿ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ಚಾಮರಾಜನಗರ,ಜುಲೈ,9,2025 (www.justkannada.in):  ಪಾಠ ಕೇಳುವಾಗಲೇ 4ನೇ ತರಗತಿ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಾಮರಾಜ ನಗರದಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲ್ಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. 4ನೇ ತರಗತಿ ವಿದ್ಯಾರ್ಥಿ ಮನೋಜ್ ಕುಮಾರ್ (10) ಮೃತ ಬಾಲಕ. ಶಾಲೆಯಲ್ಲಿ ಪಾಠ ಕೇಳುತ್ತಿದ್ದಾಗಲೇ ಮನೋಜ್ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.vtu

ಹೃದಯಸಂಬಂಧಿ ಖಾಯಿಲೆಯಿಂದ ಮನೋಜ್ ಬಳಲುತ್ತಿದ್ದ. ಮನೋಜ್ ಹೃದಯದಲ್ಲಿ ರಂಧ್ರ ಇತ್ತು ಎಂಬ ಮಾಹಿತಿ ಲಭ್ಯವಾಗಿದೆ.

Key words: 4th grade, student , heart attack , death