ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ವಿದ್ಯಾರ್ಥಿನಿಯರ ಪ್ರತಿಭಟನೆ: ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಿಗೆ ತರಾಟೆ…

ಮೈಸೂರು,ನ,12,2019(www.justkannada.in): ವಿದ್ಯಾರ್ಥಿನಿಲಯದಲ್ಲಿ ಮೂಲಭೂತ ಸೌಕರ್ಯಗಳನ್ನ ಕಲ್ಪಿಸಿಕೊಡುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸೇರಿದ ಕಾಲೇಜಿನ ಮಹಿಳಾ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ಪ್ರತಿಭಟನೆ ನಡಸಿದರು.

ಮಹಾರಾಜ ಕಾಲೇಜು ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ನೀರು, ವಿದ್ಯುತ್, ಯುಪಿಎಸ್ ಸೇರಿದಂತೆ ಹಲವು ಸಮಸ್ಯೆ ವಿದ್ಯಾರ್ಥಿನಿಯರು ಎದುರಿಸುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ಇಂದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿನೀಯರು ಮುಖ ತೊಳೆಯೊದಕ್ಕೆ ನೀರಿಲ್ಲ. ಇನ್ನು ಸ್ನಾನ, ಬಟ್ಟೆ ತೊಳೆಯೋಕೆ ಎಲ್ಲಿಂದ ಸಿಗಬೇಕು ನೀರು.? ಶೋಚನೀಯ ಸ್ಥಿತಿಯಲ್ಲಿ ದಿನ ಕಳೆಯುತ್ತಿದ್ದೆವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಗೆಯೇ ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕ ರಾಮಸ್ವಾಮಿ ಅವರನ್ನ ವಿದ್ಯಾರ್ಥಿನಿಯರು ತರಾಟೆಗೆ ತೆಗೆದುಕೊಂಡರು. ಈ ವೇಳೆ ತತಕ್ಷಣವಾಗಿ ಸಮಸ್ಯೆ ಬಗೆಹರಿಸುತ್ತೇನೆಂದು ರಾಮಸ್ವಾಮಿ.ಭರವಸೆ ನೀಡಿದರು. ಇದುವರೆಗೆ ಹಾಸ್ಟೆಲ್ನಲ್ಲಿನ ಸಮಸ್ಯೆ ನನ್ನ ಗಮನಕ್ಕೆ ಬಂದಿಲ್ಲ.ತಕ್ಷಣ ಸಮಸ್ಯೆ ಬಗೆಹರಿಸುತ್ತೇನೆ ಎಂದು ರಾಮಸ್ವಾಮಿ ತಿಳಿಸಿದರು.

Key words: Student -protests –infrastructure-mysore