Thursday, August 13, 2026

BDA Apartments

Home Crime ಹಾಡಹಗಲೇ ಕಾಲೇಜಿನಲ್ಲಿ ಚಾಕುವಿನಿಂದ ಇರಿದು ವಿದ್ಯಾರ್ಥಿನಿ ಹತ್ಯೆ: ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ.

ಹಾಡಹಗಲೇ ಕಾಲೇಜಿನಲ್ಲಿ ಚಾಕುವಿನಿಂದ ಇರಿದು ವಿದ್ಯಾರ್ಥಿನಿ ಹತ್ಯೆ: ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ.

ಬೆಂಗಳೂರು,ಜನವರಿ,2,2023(www.justkannada.in): ಯುವಕನೊಬ್ಬ ಹಾಡಹಗಲೇ ಕಾಲೇಜಿನಲ್ಲಿ ಚಾಕುವಿನಿಂದ ಇರಿದು ವಿದ್ಯಾರ್ಥಿನಿ ಹತ್ಯೆ ಮಾಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಯಲಹಂಕ ತಾಲ್ಲೂಕು ರಾಜಾನುಕುಂಟೆ ಪ್ರೆಸಿಡನ್ಸಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಯುವಕನೋರ್ವ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದಿದ್ದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬಳಿಕ ಯುವಕ ತನೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಪ್ರೀತಿ ಪ್ರೇಮದ ವಿಚಾರಕ್ಕೆ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರಾಜಾನುಕುಂಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Key words:  student – stabbed – death – college -bangalore