1ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್: ಮೌಲ್ಯಾಂಕನ ವಿಶ್ಲೇಷಣೆ ನಡೆಸಿ ಫಲಿತಾಂಶ ಪ್ರಕಟಕ್ಕೆ ಶಿಕ್ಷಣ ಇಲಾಖೆ ಆದೇಶ…

ಬೆಂಗಳೂರು,ಏಪ್ರಿಲ್,20,2021(www.justkananda.in):  ಕೊರೋನಾ ಸೋಂಕಿನ ಎರಡನೇ ಅಲೆ ಪ್ರಸರಣದ ಹಿನ್ನೆಲೆಯಲ್ಲಿ ಈ ಬಾರಿ 1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸದೆ, ಕೇವಲ ಇದುವರೆಗೆ ನಡೆದಿರುವ ತರಗತಿಗಳ ಆಧಾರದ ಮೇಲೆ ಮೌಲ್ಯಾಂಕನ ವಿಶ್ಲೇಷಣೆ ನಡೆಸಿ ಫಲಿತಾಂಶ ಪ್ರಕಟಿಸುವಂತೆ  ಶಿಕ್ಷಣ ಇಲಾಖೆ ತಿಳಿಸಿದೆ. Students 1st to 9th –grade- pass- without –exam- Education  Department

ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು,  ಒಂದರಿಂದ ಐದನೇ ತರಗತಿ ಮತ್ತು ಆರರಿಂದ ಒಂಭತ್ತನೇ ತರಗತಿಗಳವರೆಗೆ ಮೌಲ್ಯಾಂಕನ ಕುರಿತು ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. 1ರಿಂದ 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮದಲ್ಲಿ ನಿರ್ವಹಿಸಿದ ದಾಖಲೆಗಳು/ ಸಂವಹನದ ಆಧಾರದ ಮೇಲೆ ಕೆಲವು ಶಾಲೆಯವರು ಆನ್‍ಲೈನ್ ಮೂಲಕ ತರಗತಿ ನಿರ್ವಹಿಸಿದ್ದಲ್ಲಿ ಆ ಸಂದರ್ಭದಲ್ಲಿ ಅವಲೋಕಿಸಿದ ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ಮಕ್ಕಳಿಗೆ ನೀಡಿದ್ದ ಪ್ರಬಂಧ, ಗೃಹ ಕೆಲಸ ಇತರೆ ಚಟುವಟಿಕೆಗಳನ್ನಾಧರಿಸಿದ ಕೃತಿ ಸಂಪುಟ/ ಚೈಲ್ಡ್ ಪ್ರೊಫೈಲ್, ಇತರೆ ಲಭ್ಯ ದಾಖಲೆಗಳನ್ನು   ಅವಲೋಕಿಸಿ ಈವರೆವಿಗೆ ಪೂರೈಸಿದ ಪಠ್ಯವಸ್ತು/ಸಾಮರ್ಥ್ಯ/ ಕಲಿಕಾ-ಫಲಗಳ ಸಾಧನೆ ಮತ್ತು ಕೊರತೆಗಳನ್ನು ಶಾಲಾ ಹಂತದಲ್ಲಿ ಸಿಸಿಇ ನಿಯಮಗಳಂತೆ ವಿಶ್ಲೇಷಿಸಿ ಪ್ರಗತಿ ಪತ್ರದಲ್ಲಿ ದಾಖಲಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ತರಗತಿಗೆ ಬಡ್ತಿ ನೀಡುವುದು ಮತ್ತು ಅದನ್ನು ಪ್ರಗತಿ ಪತ್ರದಲ್ಲಿ ದಾಖಲಿಸುವುದು ಸೇರಿದಂತೆ ಈ ಎಲ್ಲ ಪ್ರಕ್ರಿಯೆಗಳನ್ನು ಏಪ್ರಿಲ್ 30ರೊಳಗೆ ನಿರ್ವಹಿಸಿ ಫಲಿತಾಂಶ ದಾಖಲಿಸಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. Students 1st to 9th –grade- pass- without –exam- Education  Department

ಒಂದರಿಂದ ಏಳು/ಎಂಟನೇ ತರಗತಿಗಳು ಇರುವ ಪ್ರಾಥಮಿಕ ಶಾಲೆಗಳಿಗೆ ಮೇ 1ರಿಂದ ಜೂನ್ 14ರವರಗೆ ಬೇಸಿಗೆ ರಜೆ. ಜೂ. 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ ಮತ್ತು ಪ್ರೌಢಶಾಲೆಗಳಿಗೆ ಅಂದರೆ 8 ಮತ್ತು 9ನೇ ತರಗತಿಗಳಲ್ಲಿನ ವಿದ್ಯಾರ್ಥಿಗಳಿಗೆ ಮೇ 1ರಿಂದ ಜುಲೈ 14ರವರೆಗೆ ಬೇಸಿಗೆ ರಜೆ ಇರುತ್ತದೆ. ಪ್ರೌಢಶಾಲೆಗಳ ಶಿಕ್ಷಕರಿಗೆ ಜೂ. 15ರಿಂದ ಜುಲೈ 14ರವರೆಗೆ ಬೇಸಿಗೆ ರಜೆ ಇರುತ್ತದೆ. ಜೂ. 21ರಿಂದ ಜು. 5ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತವೆ. ಜು. 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Key words: Students 1st to 9th –grade- pass- without –exam- Education  Department