Sunday, September 27, 2026

BDA Apartments

Home Front Page ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರು ನೀರುಪಾಲು: ಸಿಎಂ ಸಂತಾಪ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರು ನೀರುಪಾಲು: ಸಿಎಂ ಸಂತಾಪ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

ಬೆಂಗಳೂರು,ಡಿಸೆಂಬರ್,11,2024 (www.justkannada.in): ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ವೇಳೆ ಮುರುಡೇಶ್ವರ ಬೀಚ್ ನಲ್ಲಿ ನೀರುಪಾಲಾದ ವಿದ್ಯಾರ್ಥಿನಿಯರ ಕುಟುಂಬಕ್ಕೆ  ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರವನ್ನ ಘೋಷಣೆ ಮಾಡಲಾಗಿದೆ.

ವಿದ್ಯಾರ್ಥಿನಿಯರ ಸಾವಿಗೆ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ,  ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು.

ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ.

ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ.

Key words: Student, drowns, Murudeshwara, CM, Siddaramaiah, condoles