Saturday, October 17, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Front Page ನಿರ್ಮಲಾ ಸೀತಾರಾಮನ್ ಕೆಲಸಕ್ಕೆ ‘ಚಮಚಾಗಿರಿ’ ಎಂದು ಟೀಕಿಸಿದ ಸುಬ್ರಮಣಿಯನ್ ಸ್ವಾಮಿ

ನಿರ್ಮಲಾ ಸೀತಾರಾಮನ್ ಕೆಲಸಕ್ಕೆ ‘ಚಮಚಾಗಿರಿ’ ಎಂದು ಟೀಕಿಸಿದ ಸುಬ್ರಮಣಿಯನ್ ಸ್ವಾಮಿ

ಬೆಂಗಳೂರು, ಸೆಪ್ಟೆಂಬರ್ 04, 2022 (www.justkannada.in): ನಿರ್ಮಲಾ ಸೀತಾರಾಮನ್‌ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಕಟುವಾಗಿ ಟೀಕಿಸಿದ್ದು, ಚಮಚಾಗಿರಿಯ ಅತ್ಯಂತ ನಾಚಿಕೆಗೇಡಿನ ಪ್ರದರ್ಶನ ಎಂದಿದ್ದಾರೆ.

ತೆಲಂಗಾಣದ ಪಡಿತರ ವಿತರಣಾ ಕೇಂದ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಚಿತ್ರ ಇಲ್ಲದಿರುವ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಗರಂ ಆಗಿದ್ದರು.

ಈ ಕುರಿತು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸುಬ್ರಮಣಿಯನ್‌ ಸ್ವಾಮಿ,  ಪಡಿತರ ಕೇಂದ್ರಗಳಲ್ಲಿ ಪ್ರಧಾನಿ ಚಿತ್ರ ಇಲ್ಲದಿರುವ ಬಗ್ಗೆ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ (ಪಿಡಿಎಸ್‌)ಕ್ಕೆ ದೂರು ನೀಡಬಹುದಿತ್ತು’ ಎಂದಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಕಾಮರೆಡ್ಡಿ ಜಿಲ್ಲೆಯಲ್ಲಿ ಪಡಿತರ ಕೇಂದ್ರಗಳಿಗೆ ಭೇಟಿ ನೀಡಿದ್ದ ಸಂದರ್ಭ ಅಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.