ಪಂಚರತ್ನಯಾತ್ರೆ ಸಕ್ಸಸ್ ಕಂಡು ಕೆಲವರಿಗೆ ಕಳವಳ- ಬಿಜೆಪಿ, ಕಾಂಗ್ರೆಸ್ ಗೆ ಮಾಜಿ ಸಿಎಂ ಹೆಚ್.ಡಿಕೆ ಟಾಂಗ್.

ಕೋಲಾರ, ನವಂಬರ್, 21,2022(www.justkannada.in):  ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಜೆಡಿಎಸ್  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚಯಾತ್ರೆ ನಡೆಸಿ ಜನರ ಸಂಕಷ್ಟ ಆಲಿಸುತ್ತಿದೆ. ಈ ಮಧ್ಯೆ ಕೋಲಾರದಲ್ಲಿ ನಡೆಯುತ್ತಿರುವ ಈ ಯಾತ್ರೆ 4ನೇ ದಿನಕ್ಕೆ ಕಾಲಿಟ್ಟಿದೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಜನರು ಪರಿವರ್ತನೆ ಬಯಸಿ  ಉತ್ತಮ ರೀತಿಯಲ್ಲಿ ಸ್ಪಂದನೆ ನೀಡುತ್ತಿದ್ದಾರೆ.  ರಾಷ್ಟ್ರೀಯ ಪಕ್ಷಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಕೋಲಾರದ ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಕ್ಕಿಲ್ಲ. ಪಂಚರತ್ನ ಯೋಜನೆ ಮೂಲಕ ಪ್ರತಿ ಕುಟುಂಬಕ್ಕೆ ಪರಿಹಾರ  ನೀಡುತ್ತೇವೆ. ಪಂಚರತ್ನ ಕಾರ್ಯಕ್ರಮ ಸಕ್ಸಸ್ ಕಂಡು ಕೆಲವರಿಗೆ ಕಳವಳ ಉಂಟಾಗಿದೆ.  ಪಂಚರತ್ನ ಯಾತ್ರೆ ರದ್ದು ಬಗ್ಗೆ ಸುಳ್ಳುಸುದ್ಧಿ ಹಬ್ಬಿಸಿದ್ದಾರೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

Key words: success – Pancharatnayatra- Former CM- HD Kumaraswamy