ಆಪರೇಷನ್ ಸಿಂಧೂರ: ಪ್ರಧಾನಿ ಮೋದಿಗೆ ಸುದೀರ್ಘ ಪತ್ರ ಬರೆದ ನಟ ಕಿಚ್ಚ ಸುದೀಪ್

ಬೆಂಗಳೂರು,ಮೇ,10,2025 (www.justkannada.in): ನಟ ಕಿಚ್ಚ ಸುದೀಪ್ ರಾಜ್ಯ ಮತ್ತು ರಾಷ್ಟ್ರದ ವಿಚಾರಗಳ ಬಗ್ಗೆ ದನಿ ಎತ್ತುತ್ತಲೇ ಬಂದಿದ್ದು. ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಆಗಿದ್ದಾಗ  ದಾಳಿಯನ್ನ ಖಂಡಿಸಿ ಬಳಿಕ ಭಾರತೀಯ ಸೇನೆ ಮಾಡಿದ್ದ ಆಪರೇಷನ್ ಸಿಂಧೂರ್ ಅನ್ನು ಮೆಚ್ಚಿ ಕೊಂಡಾಡಿದ್ದರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಟ ಕಿಚ್ಚ ಸುದೀಪ್ ಸುದೀರ್ಘ ಪತ್ರವೊಂದನ್ನ ಬರೆದಿದ್ದಾರೆ.

ಆಪರೇಶನ್‌ ಸಿಂಧೂರದ ವಿಜಯಕ್ಕೆ ಧನ್ಯವಾದಗಳನ್ನು ತಿಳಿಸಿರುವ ನಟ ಕಿಚ್ಚ ಸುದೀಪ್‌ , ನನ್ನ ತಾಯಿ ಸರೋಜಾ ಸಂಜೀವ್ ಅವರು ನಿಧನರಾದ ವೇಳೆ ನೀವು ಬರೆದ ಪತ್ರ, ವೈಯಕ್ತಿಕ ನಷ್ಟದ ಆ ಕಠಿಣ ಸಮಯದಲ್ಲಿ ನನಗೆ ಶಕ್ತಿ, ಧೈರ್ಯವನ್ನು ತುಂಬಿತ್ತು. ಅದು ನನಗೆ ಜೀವನ ಪರ್ಯಂತ ನೆನಪು ಉಳಿಯಲಿವೆ ಎಂದು ತಮ್ಮ ತಾಯಿ ನಿಧನರಾದಾಗ ಪ್ರಧಾನಿ ಮೋದಿ ಬರೆದಿದ್ದ ಪತ್ರದ ಬಗ್ಗೆ ಸ್ಮರಿಸಿದ್ದಾರೆ.

ಹಾಗೆಯೇ  ಇಂದು ನಾನು ಈ ಪತ್ರವನ್ನು ಕೇವಲ ಒಬ್ಬ ಮಗನಾಗಿ ಬರೆಯುತ್ತಿಲ್ಲ ಬದಲಿಗೆ ದೇಶದ ನಾಗರೀಕನಾಗಿ ಬರೆಯುತ್ತಿದ್ದೇನೆ, ಆಪರೇಷನ್ ಸಿಂಧೂರ್‌ ನ ವಿಜಯೋತ್ಸವಕ್ಕೆ ರಾಷ್ಟ್ರವೇ ನಮಿಸಿದೆ. ನಾನು ನಿಮಗೆ ಆಳವಾದ ಅಭಿಮಾನದಿಂದ ಬರೆಯುತ್ತೇನೆ.

ನನ್ನ ತಾಯಿ ನಿಧನದ ಸಂತಾಪ ಪತ್ರಕ್ಕೆ ನಿಮಗೆ ಧನ್ಯವಾದ ಅರ್ಪಿಸುತ್ತೇನೆ. ಇಂದು ನಾನು ಕೇವಲ ಕೃತಜ್ಞತಾಪೂರ್ವಕ ಮಗನಾಗಿ ಅಲ್ಲದೇ ಹೆಮ್ಮೆಯ ಭಾರತೀಯನಾಗಿ ಪತ್ರ ಬರೆಯುತ್ತಿದ್ದೇನೆ. ಆಪರೇಷನ್ ಸಿಂಧೂರ ವಿಜಯೋತ್ಸವಕ್ಕೆ ನನ್ನ ಮೆಚ್ಚುಗೆ ಇದೆ. ಅದು ಕೇವಲ ಪ್ರತಿಕ್ರಿಯೆಯಾಗಿರಲಿಲ್ಲ. ಭಾರತವು ಅಲುಗಾಡುವುದಿಲ್ಲ, ಭಾರತವು ಮರೆಯುವುದಿಲ್ಲ ಮತ್ತು ಭಾರತವು ಯಾವಾಗಲೂ ಉದಯಿಸುತ್ತದೆ ಎಂಬ ದಿಟ್ಟ, ನಿರ್ಣಾಯಕ ಸಂದೇಶವನ್ನು ಜಗತ್ತಿಗೆ ನೀಡಿದೆ. ಕೇವಲ ಪದಗಳಿಂದ ಮಾರ್ಗದರ್ಶನ ಮಾಡದೆ, ದೃಢ ನಿಶ್ಚಯದಿಂದ ಮಾರ್ಗದರ್ಶನ ಮಾಡುವ ನಾಯಕನನ್ನು ನಾವು ನೋಡುತ್ತಿದ್ದೇವೆ. ಪ್ರತಿಯೊಬ್ಬ ಕನ್ನಡಿಗ ಮತ್ತು ಇಡೀ ಕನ್ನಡ ಚಲನಚಿತ್ರೋದ್ಯಮವು ನಿಮ್ಮೊಂದಿಗೆ ದೃಢವಾಗಿ ನಿಂತಿದೆ.

ನಿಮ್ಮ ನಾಯಕತ್ವದಲ್ಲಿ, ನಮ್ಮ ರಕ್ಷಣಾ ಪಡೆಗಳು ಸಾಟಿಯಿಲ್ಲದ ನಿಖರತೆ, ಶಿಸ್ತು ಮತ್ತು ಶೌರ್ಯವನ್ನು ಪ್ರದರ್ಶಿಸಿವೆ. ಅವರ ಯಶಸ್ಸು ನಮ್ಮ ಹೆಮ್ಮೆ. ನಾವು ಒಗ್ಗಟಿನಲ್ಲಿದ್ದೇನೆ, ಒಂದು ಧ್ವನಿ, ಒಂದು ರಾಷ್ಟ್ರವಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ. ಜೈ ಹಿಂದ್. ಜೈ ಕರ್ನಾಟಕ. ಜೈ ಭಾರತ್’ ಎಂದು ನಟ ಸುದೀಪ್ ಪತ್ರದಲ್ಲಿ  ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Key words: Operation Sindoora, Actor, Sudeep, long letter, PM Modi