ಬೆಳಗಾವಿ,ಜನವರಿ,7,2026 (www.justkannada.in): ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ಮರಕುಂಬಿಯಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು 6 ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದೆ.
ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಬೆಳಗಾವಿ ಎಸ್ ಪಿ ಕೆ.ರಾಮರಾಜನ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: Sugar factory, boiler, explosion, Two workers, die







