Friday, September 18, 2026

BDA Apartments

ಅರ್ಜುನನ ಸಾವಿನ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ- ಸಿಎಂ ಸಿದ್ದರಾಮಯ್ಯ BDA JK_Adv BDA Adv
Home Front Page ಅರ್ಜುನನ ಸಾವಿನ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ- ಸಿಎಂ ಸಿದ್ದರಾಮಯ್ಯ.

ಅರ್ಜುನನ ಸಾವಿನ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ- ಸಿಎಂ ಸಿದ್ದರಾಮಯ್ಯ.

ಬೆಂಗಳೂರು,ಡಿಸೆಂಬರ್,6,2023(www.justkannada.in):  ಕಾಡಾನೆ ಜೊತೆ ಕಾಳಗದ ವೇಳೆ ಮೃತಪಟ್ಟ  ಅರ್ಜುನ ಆನೆಯ ಸಾವಿನ ಕುರಿತು ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದು ಈ ಹಿನ್ನೆಲೆಯಲ್ಲಿ ತನಿಖೆಗೆ ಆಗ್ರಹ ಕೇಳಿಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅರ್ಜುನನ ಸಾವಿನ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಅರ್ಜುನನ  ಸಾವಿನ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ.   ಯಸಳೂರು ಬಳಿ ಅರ್ಜುನನ ಸ್ಮಾರಕ ನಿರ್ಮಿಸಬೇಕು.  ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಅರ್ಜುನನ ಸಾವಿನ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ siddaramaiah123 ಭ್ರೂಣ ಹತ್ಯೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಈಗಾಗಲೇ ಕೇಸ್ ಕುರಿತು ಸಿಐಡಿ ತನಿಖೆಯಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ . ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

Key words: suggested -investigation – Arjuna- death-CM Siddaramaiah.