ಅರ್ಜುನನ ಸಾವಿನ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ- ಸಿಎಂ ಸಿದ್ದರಾಮಯ್ಯ.

ಬೆಂಗಳೂರು,ಡಿಸೆಂಬರ್,6,2023(www.justkannada.in):  ಕಾಡಾನೆ ಜೊತೆ ಕಾಳಗದ ವೇಳೆ ಮೃತಪಟ್ಟ  ಅರ್ಜುನ ಆನೆಯ ಸಾವಿನ ಕುರಿತು ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದು ಈ ಹಿನ್ನೆಲೆಯಲ್ಲಿ ತನಿಖೆಗೆ ಆಗ್ರಹ ಕೇಳಿಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅರ್ಜುನನ ಸಾವಿನ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಅರ್ಜುನನ  ಸಾವಿನ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ.   ಯಸಳೂರು ಬಳಿ ಅರ್ಜುನನ ಸ್ಮಾರಕ ನಿರ್ಮಿಸಬೇಕು.  ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.  ಭ್ರೂಣ ಹತ್ಯೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಈಗಾಗಲೇ ಕೇಸ್ ಕುರಿತು ಸಿಐಡಿ ತನಿಖೆಯಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ . ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

Key words: suggested -investigation – Arjuna- death-CM Siddaramaiah.