ಮೈಸೂರು ಮೂಲದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ.

ತುಮಕೂರು,ಜೂನ್,11,2022(www.justkannada.in): ತುಮಕೂರು ಎಸ್ ಎಸ್ ಐಟಿ  ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮೈಸೂರು ಮೂಲದ ಕವಿತಾ (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ತುಮಕೂರಿನ ಎಸ್ಎಸ್ ಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರ್ ಅಂತಿಮ ವರ್ಷ ವಿದ್ಯಾರ್ಥಿನಿಯಾಗಿರುವ ಕವಿತಾ ಶುಕ್ರವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿರುವುದಿಲ್ಲ.

ಘಟನೆ ಬಗ್ಗೆ ತಿಳಿದು ಹಾಸ್ಟೆಲ್ ಗೆ ಕಾಲೇಜಿ ಪ್ರಾಂಶುಪಾಲರು ಪ್ರಾಧ್ಯಾಪಕರು ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಯುವತಿಯ ಪೋಷಕರು ತುಮಕೂರಿಗೆ ಆಗಮಿಸಿದ್ದು ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚೆಗೆ ತುಮಕೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿವಾಗಲು ಕಾರಣವಾಗಿದೆ.

Key words: Suicide – civil engineering -student –tumkur- Mysore.