ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ: ಮೂವರು ಸಾವು

ಬೆಳಗಾವಿ,ಜುಲೈ,9,2025 (www.justkannada.in):  ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ಈ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ನಗರದ ಜೋಷಿಮಾಳ್ ನಲ್ಲಿ ಈ ಘಟನೆ ನಡೆದಿದೆ. ಸಂತೊಷ್ ಕುರಡೇಕರ್,  ಸುವರ್ಣಾ ಕುರಡೇಕರ್,  ಮಂಗಳಾ ಕುರಡೇಕರ್ ಮೃತಪಟ್ಟವರು. ಇನ್ನೋರ್ವ ಮಗಳು ಸುನಂದಾ ಕುರಡೇಕರ್  ಸ್ಥಿತಿ ಗಂಭೀರವಾಗಿದ್ದು  ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ಕಸಾಲಿಗನಾಗಿರುವ ಸಂತೋಷ್ ಕುರಡೇಕರ್ ಚಿನ್ನಾಭರಣ ವ್ಯವಹಾರ ಮಾಡುತ್ತಿದ್ದರು. ಈ ಮಧ್ಯೆ ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾದ ಶಂಕೆ ವ್ಯಕ್ತವಾಗಿದೆ. ಬೆಳಿಗ್ಗೆ 9 ಗಂಟೆ ವೇಳೆಗೆ ಮರಾಠಿಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.vtu

Key words: same family, attempt, suicide, Three, die