ನಾಳೆ ಬೆಳಿಗ್ಗೆ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ.

ಬೆಂಗಳೂರು,ಏಪ್ರಿಲ್,4, 2024 (www.justkannada.in): ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಿಂದ ಹಿಂದೆ ಸರಿದಿರುವ ಹಾಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ನಾಳೆ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಈ  ಕುರಿತು ಸಂಸದೆ ಸುಮಲತಾ ಅಂಬರೀಶ್  ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಸುಮಲತಾ ಅಂಬರೀಶ್, ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರ.  ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಈಗ ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್ 2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ’ ಎಂದು  ತಿಳಿಸಿದ್ದಾರೆ.

ನಾಳೆ ಬೆಳಗ್ಗೆ 11:30 ರ ವೇಳೆಗೆ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಪಕ್ಷದ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ವೇಳೆ ಮಾಜಿ ಸಿಎಂ ಬಿ.ಎಸ್  ಯಡಿಯೂರಪ್ಪ, ಬಿ.ವೈ ವಿಜಯೇಂದ್ರ ಸೇರಿ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ.

Key words:  Sumalatha Ambarish, joins, BJP, tomorrow