Tuesday, September 29, 2026

BDA Apartments

ಸಂಸದೆ ಸುಮಲತಾ ಅಂಬರೀಶ್ ಭೇಟಿಯಾದ ಬಿ.ವೈ ವಿಜಯೇಂದ್ರ BDA JK_Adv BDA Adv
Home Front Page ಸಂಸದೆ ಸುಮಲತಾ ಅಂಬರೀಶ್ ಭೇಟಿಯಾದ ಬಿ.ವೈ ವಿಜಯೇಂದ್ರ.

ಸಂಸದೆ ಸುಮಲತಾ ಅಂಬರೀಶ್ ಭೇಟಿಯಾದ ಬಿ.ವೈ ವಿಜಯೇಂದ್ರ.

ಬೆಂಗಳೂರು,ಮಾರ್ಚ್,29,2024 (www.justkannada.in): ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಹಾಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು ನಾಳೆ ಬೆಂಬಲಿಗರ ಸಭೆ ಕರೆದಿದ್ದಾರೆ. ನಾಳೆ ತಮ್ಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ಈ ಮಧ್ಯೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸುಮಲತಾ ಅಂಬರೀಶ್ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ.  ಬೆಂಗಳೂರಿನ ನಿವಾಸದಲ್ಲಿ ಸುಮಲತಾ ಅವರನ್ನ ಭೇಟಿಯಾದ ಬಿವೈ ವಿಜಯೇಂದ್ರ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯನ್ನ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.ಸಂಸದೆ ಸುಮಲತಾ ಅಂಬರೀಶ್ ಭೇಟಿಯಾದ ಬಿ.ವೈ ವಿಜಯೇಂದ್ರ sumalatha-byv sumalatha byv

ಈ ಬಾರಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾ ಅಂಬರೀಶ್  ಅವರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಟಿಕೆಟ್ ಬೇಡಿಕೆ ಇಟ್ಟಿದ್ದರು. ಆದರೆ ಮಂಡ್ಯ ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟುಕೊಟ್ಟಿರುವ ಕಾರಣ ಸುಮಲತಾ ಅವರಿಗೆ ಟಿಕೆಟ್ ಕೈತಪ್ಪಿದೆ. ನಾಳೆ ಸುಮಲತಾ  ಅವರು ಬೆಂಬಲಿಗರ ಸಭೆ ಕರೆದಿದ್ದಾರೆ.

Key words:  Sumalatha Ambarish, met, B.Y Vijayendra.