Sunday, August 9, 2026

BDA Apartments

Home Front Page ಕೊರೊನಾ ಸೋಂಕಿತರನ್ನು ನಿಂದಿಸಬೇಡಿ ಎಂದ ಸಂಸದೆ ಸುಮಲತಾ

ಕೊರೊನಾ ಸೋಂಕಿತರನ್ನು ನಿಂದಿಸಬೇಡಿ ಎಂದ ಸಂಸದೆ ಸುಮಲತಾ

ಬೆಂಗಳೂರು, ಜುಲೈ 18, 2020 (www.justkannnada.in): ಕೊರೊನಾ ಸೋಂಕಿತರನ್ನ ಅಪರಾಧಿಗಳ ರೀತಿ ಕಾಣುವುದು, ಸಾಮಾಜದ ನಿಂದನೆಗೆ ಗುರಿ ಮಾಡುವುದು ಸರಿಯಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ನಟಿ ಹಾಗೂ ಸಂಸದೆ ಸುಮಲತಾ ಅಂಬರೀಷ್ ಗೆ ಕೊರೊನಾ ಪಾಸಿಟಿವ್ ಬಂದಿದ್ದು ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಮನೆಯಲ್ಲಿಯೆ ಚಿಕಿತ್ಸೆ ಪಡೆಯುತ್ತಿರುವ ಸುಮಲತಾ ಗುಣಮುಖರಾಗಿದ್ದಾರೆ .

ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು, ನಾನು ಕೊರೊನಾದಿಂದ ಗುಣಮುಖ ಆಗಿದ್ದೇನೆ ಎನ್ನುವ ಒಂದು ಸುದ್ದಿ ಹರಿದಾಡುತ್ತಿದೆ. ಆದರೆ, ನಾನು ಸಂಪೂರ್ಣವಾಗಿ ಗುಣಮುಖವಾಗಿರುವುದು, ಕ್ವಾರಂಟೈನ್ ಅವಧಿ ಮುಗಿದು, ಪರೀಕ್ಷೆಯ ಬಳಿಕವೇ ತಿಳಿಯುವುದು.

ಸದ್ಯಕ್ಕೆ ಔಷಧಿ ಹಾಗೂ ಸುಶ್ರುಷೆ ಮುಂದುವರೆದಿದೆ. ನಾನು ಗುಣಮುಖ ಆಗಲೆಂದು ನೀವೆಲ್ಲರೂ ಮಾಡಿದ ಆಶೀರ್ವಾದ, ಹಾರೈಕೆಗಳಿಗೆ ಋಣಿ. ಇನ್ನು ಕೆಲವೇ ದಿನಗಳಲ್ಲಿ ಗುಣಮುಖ ಆಗುವ ಭರವಸೆ ಇದೆ ಎಂದು ಹೇಳಿದ್ದಾರೆ.