ಮೈಸೂರು,ಮೇ,23,2025 (www.justkannada.in): ಫಾರಂ ಹೌಸ್ ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿ.ನರಸೀಪುರ ನ್ಯಾಯಾಲಯ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ʼಬಾರ್ ಹೆಡೆಡ್ ಗೂಸ್ʼ ಎಂಬ 4 ವಿಶಿಷ್ಟ ಪ್ರಭೇದದ ಬಾತುಕೋಳಿಗಳನ್ನು ನಟ ದರ್ಶನ್ ಸಾಕಿದ್ದರು. ಈ ನಡುವೆ ಕೆಂಪಯ್ಯನ ಹುಂಡಿಯ ನಟ ದರ್ಶನ್ ತೋಟದ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿ ವಿದೇಶಿ ಪ್ರಭೇದದ ಬಾತುಕೋಳಿ ವಶಕ್ಕೆ ಪಡೆದಿದ್ದರು.
ಬಾರ್ ಹೆಡೆಡ್ ಗೂಸ್ ಹೆಚ್ಚಾಗಿ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ವಲಸೆ ಬಂದಿದ್ದವು. ಇವುಗಳನ್ನು ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧವಾಗಿದೆ. ಈ ನಡುವೆ ಅರಣ್ಯಾಧಿಕಾರಿಗಳಿಗೆ ನಟ ದರ್ಶನ್ ಬಾತುಕೊಳಿಗಳನ್ನ ಸ್ನೇಹಿತರು ನೀಡಿದ್ದರು ಎಂದು ಸ್ಪಷ್ಟನೆ ನೀಡಿದ್ದರು. ನಟ ದರ್ಶನ್ ವಿರುದ್ಧ ನಿಷೇಧಿತ ವನ್ಯ ಪಕ್ಷಿಗಳ ಸಾಕಣೆಗಾಗಿ ಪ್ರಕರಣ ದಾಖಲಾಗಿತ್ತು. ಇದೀಗ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ನೀಡಿದೆ.
Key words: Mysore court, Summons, actors, Darshan, Vijayalakshmi