ಸುನಂದಾ ಪುಷ್ಕರ್ ಸಾವಿನ ಪ್ರಕರಣ: ಕಾಂಗ್ರೆಸ್ ಸಂಸದ ಶಶಿ ತರೂರ್ ನಿರ್ದೋಷಿ ಎಂದು ಕೋರ್ಟ್ ತೀರ್ಪು.

ನವದೆಹಲಿ,ಆಗಸ್ಟ್,18,2021(www.justkannada.in):  ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್  ನಿರ್ದೋಷಿ ಎಂದು ದೆಹಲಿ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ತರೂರ್ ಅವರನ್ನು ಆರೋಪಮುಕ್ತಗೊಳಿಸಿ ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.

ಕಾಂಗ್ರೆಸ್ ಸಂಸದ ಶಶಿ ತರೂರ್  ಪತ್ನಿ ಸುನಂದಾ ಪುಷ್ಕರ್ 2014ರಲ್ಲಿ ದೆಹಲಿಯ ಫೈವ್ ಸ್ಟಾರ್ ಹೊಟೇಲ್ ನ ಕೋಣೆಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದರು. ಸುನಂದಾ ಪುಷ್ಕರ್ ಅವರ ಮೃತದೇಹ ಹೊಟೇಲ್ ರೂಂನಲ್ಲಿ ಪತ್ತೆಯಾಗಿತ್ತು. ಈ ಕುರಿತು ಪ್ರಕರಣ ದಾಖಲಾಗಿತ್ತು.

ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಕೇಳಿಬಂದಿತ್ತು. ತಮ್ಮ ವಿರುದ್ಧದ ಆರೋಪ ಕೈಬಿಡುವಂತೆ ಶಶಿ ತರೂರ್ ಕೋರ್ಟ್ ಗೆ ಮನವಿ ಮಾಡಿದ್ದರು.

Key words: Sunanda Pushkar- Death –case- Congress MP -Shashi Tharoor – Blameless