ಮಹಾರಾಷ್ಟ್ರದ ಡಿಸಿಎಂ ಆಗಿ ಸುನೇತ್ರಾ ಪವರ್ ಪ್ರಮಾಣ ವಚನ ಸ್ವೀಕಾರ

ಮುಂಬೈ,ಜನವರಿ,31,2026 (www.justkannada.in):  ಚುನಾವಣಾ ಪ್ರಚಾರಕ್ಕೆ ತೆರಳುವ ವೇಳೆ ಬಾರಾಮತಿಯಲ್ಲಿ ವಿಮಾನ ಪತನದಿಂದ ನಿಧನರಾದ ಎನ್​ಸಿಪಿ ಮುಖ್ಯಸ್ಥ ಹಾಗೂ ಡಿಸಿಎಂ ಆಗಿದ್ದ ಅಜಿತ್ ಪವಾರ್ ಅವರ ಹುದ್ದೆಯನ್ನು ಇದೀಗ ಅವರ ಪತ್ನಿ ಸುನೇತ್ರಾ ಪವಾರ್ ಅವರಿಗೆ ನೀಡಲಾಗಿದೆ.

ಇಂದು ಮಹಾರಾಷ್ಟ್ರದ ಮೊದಲ ಮಹಿಳಾ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.  ಮಹಾರಾಷ್ಟ್ರದ ರಾಜ್ಯಪಾಲರ ಕಚೇರಿ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ರಾಜ್ಯಪಾಲ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಈ  ವೇಳೆ  ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಡಿಸಿಎಂ ಏಕನಾಥ್ ಶಿಂಧೆ ಹಾಗೂ ಎನ್ ​ಸಿಪಿ ಪಕ್ಷದ ನಾಯಕರು, ಶಾಸಕರು, ಮುಖಂಡರು ಉಪಸ್ಥಿತರಿದ್ದರು. ಇನ್ನು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರ ಪವಾರ್ ಅವರಿಗೆ ಪ್ರಧಾನಿ ಮೋದಿ ಶುಭಕೋರಿದ್ದಾರೆ.

ಅಜಿತ್ ಪವಾರ್ ಅವರು ಬಾರಾಮತಿಗೆ ಚುನಾವಣೆ ಪ್ರಚಾರಕ್ಕೆ ಖಾಸಗಿ ವಿಮಾನದಲ್ಲಿ ತೆರಳುತ್ತಿದ್ದ ವೇಳೆ ವಿಮಾನ ಪತನವಾಗಿ ಅಜಿತ್ ಪವಾರ್ ಸೇರಿ ಐದು ಮಂದಿ ಸಾವನ್ನಪ್ಪಿದ್ದರು.

Key words: Sunetra Power, Maharashtra, first, woman, DCM