Wednesday, August 12, 2026

BDA Apartments

Home Uncategorized ಐಪಿಎಲ್ ಇಂದು ಆರ್’ಸಿಬಿಗೆ ‘ಸೂಪರ್ ಲಕ್’ ಪಂದ್ಯ: ಬೆಂಗಳೂರಲ್ಲಿ ಮಳೆ ಆತಂಕ!

ಐಪಿಎಲ್ ಇಂದು ಆರ್’ಸಿಬಿಗೆ ‘ಸೂಪರ್ ಲಕ್’ ಪಂದ್ಯ: ಬೆಂಗಳೂರಲ್ಲಿ ಮಳೆ ಆತಂಕ!

ಬೆಂಗಳೂರು, ಮೇ 21, 2023 (www.justkannada.in): ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಹಂತಕ್ಕೆ ಬಂದಿದೆ. ಲೀಗ್ ಹಂತದ ಕೊನೆಯ ಪಂದ್ಯಗಳು ಇಂದು ನಡೆಯಲಿವೆ.

ಇಂದು ಬೆಂಗಳೂರಿನ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೆಣಸಾಡಲಿದೆ. ಬೆಂಗಳೂರಲ್ಲಿ ಸುರಿದ ಭಾರೀ ಮಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಇದರ ಜತೆಗೆ ಇಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಡಲಿದೆ.

ಇಂದಿನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದು, ನಂತರದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾದರೆ ಆರ್‌ಸಿಬಿ ಟೂರ್ನಿಯಿಂದ ಹೊರಬೀಳಲಿದೆ.