ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ: ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ…

ಮೈಸೂರು,ಜು,28,2020(www.justkannada.in): ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ನೀಡಿ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರುದ್ಧ ಎಐಯುಟಿಸಿ ಪ್ರತಿಭಟನೆ ನಡೆಸಿತು.jk-logo-justkannada-logo

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಎಐಯುಟಿಸಿ ಸದಸ್ಯರು  ಪ್ರತಿಭಟನೆ ನಡೆಸಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.support-asha-worker-fight-protest-against-labor-amendment-mysore

ಸರ್ಕಾರ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಯ್ದೆ ತಿದ್ದುಪಡಿ ಮಾಡಿ ಕಾರ್ಮಿಕರನ್ನು ಜೀತ ಪದ್ದತಿಗೆ ದೂಡುತ್ತಿದೆ. ಕೂಡಲೇ ಸರ್ಕಾರ ಕಾಯ್ದೆ ತಿದ್ದುಪಡಿಯನ್ನ ಹಿಂಪಡೆಯಬೇಕು. ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಭತ್ಯೆ ಜೊತೆಗೆ ರಕ್ಷಣಾ ಸಾಮಗ್ರಿಗಳನ್ನು ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

Key words: Support – Asha  worker- fight-Protest-against -Labor Amendment-mysore