ಎನ್ ಡಿಎ ಬಲಪಡಿಸಲು ಪ್ರಾದೇಶಿಕ ಪಕ್ಷಗಳ ಬೆಂಬಲ: ಮೈತ್ರಿ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ- ಅಶ್ವಥ್ ನಾರಾಯಣ್.

ಬೆಂಗಳೂರು,ಸೆಪ್ಟಂಬರ್,9,2023(www.justkannada.in): ಎನ್ ಡಿಎ ಬಲಪಡಿಸಲು ಪ್ರಾದೇಶಿಕ ಪಕ್ಷಗಳು ಬೆಂಬಲ ಕೊಡುತ್ತಿವೆ. ಆದರೆ ಜೆಡಿಎಸ್ -ಬಿಜೆಪಿ ಮೈತ್ರಿ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ  ಮಾತನಾಡಿದ ಸಿಎನ್ ಅಶ್ವತ್ ನಾರಾಯಣ್ , ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್​ ಕೈಜೋಡಿಸಬೇಕೆಂಬ ಚರ್ಚೆ ಆಗುತ್ತಿದೆ. ಮೈತ್ರಿಗೆ ಜೆಡಿಎಸ್​ ನಾಯಕರು ಕೂಡ ಇಚ್ಛೆ ವ್ಯಕ್ತಪಡಿಸಿದ್ದಾರೆ. ಆದರೆ ಮೈತ್ರಿ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ. ಕ್ಷೇತ್ರದ ಬಗ್ಗೆ ಕೇಳಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ನಾವು ಕಳೆದ ಚುನಾವಣೆಯಲ್ಲಿ ಕೆಲವು ಕ್ಷೇತ್ರ ಕಳೆದುಕೊಂಡಿದ್ದೆವು. ಆ ಕ್ಷೇತ್ರಗಳಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬಹುದು ಎಂದರು.

ಕಾಂಗ್ರೆಸ್ ಅಪ್ರಸ್ತುತ ಪಕ್ಷ. ರಾಜ್ಯದಲ್ಲಿ ಯಾವ ರೀತಿ ಅಧಿಕಾರಕ್ಕೆ ಬಂದಿದ್ದಾರೆ ಅಂತ ವಿಶ್ಲೇಷಣೆ ಮಾಡಲ್ಲ. 100 ದಿನಗಳಲ್ಲಿ 100 ಲೋಪಗಳಿವೆ. ಕುಡಿಯುವ ನೀರಿಗೆ ಸಮಸ್ಯೆ ತಂದಿಟ್ಟಿದ್ದಾರೆ. ಭ್ರಷ್ಟಾಚಾರ ತಾಂಡವವಾಡಿದ್ದು ಲೂಟಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Key words: Support -regional parties – NDA: Ashwath Narayan.