ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ: ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ….?

ಮೈಸೂರು,ಏಪ್ರಿಲ್,6,2021(www.justkannada.in):  6ನೇ ವೇತನ ಆಯೋಗ ಜಾರಿ ಸೇರಿ ಸರ್ಕಾರ ನೀಡಿದ್ದ ಭರವಸೆ ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಹೂಡಿದ್ದು, ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ.Illegally,Sand,carrying,Truck,Seized,arrest,driver

ಈ ಮಧ್ಯೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾರಿಗೆ ನೌಕರರ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೌದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಿದೆ. ಈ ಕುರಿತು ಮಾತನಾಡಿರುವ ಮೈಸೂರು ವಿಭಾಗದ ಸಿ.ಡಿ ವಿಶ್ವನಾಥ್, ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲಿಸುತ್ತೇವೆ. ನಾಳೆ ಯಾವುದೇ ಬಸ್ ಸಂಚಾರ ಇರುವುದಿಲ್ಲ ಎಂದಿದ್ದಾರೆ.

ಸಾರಿಗೆ ನೌಕರರ ಮುಷ್ಕರಕ್ಕೆ ಕೆಎಸ್ ಆರ್ ಟಿಸಿ ಸ್ಟಾಫ್ ಮತ್ತು ವರ್ಕರ್ಸ್ ಯೂನಿಯನ್  ಬೆಂಬಲ ಸೂಚಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾತನಾಡಿರುವ ಕೆಎಸ್ ಆರ್ ಟಿಸಿ ಸ್ಟಾಫ್ ಮತ್ತು ವರ್ಕರ್ಸ್ ಯೂನಿಯನ್  ಪ್ರಧಾನ ಕಾರ್ಯದರ್ಶಿ, ಮಧುಸೂಧನ್, ನಾಳೆ ಮುಷ್ಕರಕ್ಕೆ ಬೆಂಬಲ ಇಲ್ಲ. ಎಂದಿನಂತೆ ಬಸ್ ಸಂಚರಿಸಲಿವೆ ಎಂದಿದ್ದಾರೆ.

Key words: Support – tomorrow- transport workers- strike- Mixed- response – Mysore.