ನಾಳೆ ಕರ್ನಾಟಕ ಬಂದ್ ಗೆ ರೂಪ್ಸಾ, ಬೀದಿ ಬದಿ ವ್ಯಾಪಾರಿಗಳು ಸೇರಿ ವಿವಿಧ ಸಂಘಟನೆಗಳಿಂದ ಬೆಂಬಲ.

ಬೆಂಗಳೂರು,ಸೆಪ್ಟಂಬರ್,28,2023(ww.justkannada.in): ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ನಾಳಿನ ಬಂದ್ ಗೆ ರೂಪ್ಸಾ, ಬೀದಿ ಬದಿ ವ್ಯಾಪಾರಿಗಳು ಸೇರಿ ವಿವಿಧ ಸಂಘಟನೆಗಳಿಂದ ಬೆಂಬಲ ನೀಡಿವೆ.

ಕರ್ನಾಟಕ ಬಂದ್​ಗೆ ನೈತಿಕ ಬೆಂಬಲ ನೀಡಲ ಶಾಲೆಗಳು ಮುಂದಾಗಿದೆ. ಶಾಲೆಗಳಿಗೆ ರಜೆ ನೀಡುವ ಜವಬ್ದಾರಿಯನ್ನ ಆಯಾ ಆಡಳಿತ ಮಂಡಳಿ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಶಾಲೆಗಳ ರಜೆ ನೀಡುವ ಬಗ್ಗೆ ನಿರ್ಧಾರಕ್ಕೆ ಮನವಿ ನೀಡಲಾಗಿದೆ ಎಂದು ರೂಪ್ಸಾ ಖಾಸಗಿ ಶಾಲೆಗಳ ಸಂಘಟನೆಯ ಲೋಕೇಶ್ ತಾಳಿಕಟ್ಟೆ ತಿಳಿಸಿದ್ದಾರೆ.

ನಾಳಿನ ಬಂದ್ ಗೆ ಬೀದಿ ಬದಿ ವ್ಯಾಪಾರಿಗಳು ಸಂಪೂರ್ಣ ಬೆಂಬಲ ನೀಡಿದ್ದು, ನಾಳೆ ಬೆಳಗ್ಗೆ 6 ರಿಂದ ಸಂಜೆ 6ವರೆಗೂ ರಾಜ್ಯಾದ್ಯಂತ ಬೀದಿ ಬದಿ ವ್ಯಾಪಾರಿಗಳು ಹಾಗೂ ಸ್ಥಳೀಯ ಮಾರ್ಕೆಟ್ ಬೀದಿ ಬದಿ ವ್ಯಾಪಾರಗಳು ಸಂಪೂರ್ಣ ಸ್ಥಗಿತವಾಗಲಿದೆ ಎಂದು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ರಂಗಸ್ವಾಮಿ  ತಿಳಿಸಿದ್ದಾರೆ.

ಬಂದ್​ಗೆ ಬ್ರಿಗೇಡ್​ ರೋಡ್​ನ ವರ್ತಕರು ಬೆಂಬಲ ಸೂಚಿಸಿದರೇ ಯಶವಂತಪುರ ಆಲೂಗಡ್ಡೆ ಈರುಳ್ಳಿ ವರ್ತಕರ ಸಂಘ ನೈತಿಕ ಬೆಂಬಲ ಸೂಚಿಸಿದೆ. ಇನ್ನು ಇಂದು ಹೊಟೇಲ್ ಅಸೋಸಿಯೇಷನ್ ಮಹತ್ತರ ಸಭೆ ಕರೆದಿದ್ದು ಬಂದ್ ಬೆಂಬಲಿಸುವ ಕುರಿತು ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಿದೆ.

ಹಾಗೆಯೇ ನಾಳೆ ಕೆಎಸ್ ಆರ್ ಟಿಸಿ ಬಿಎಂಟಿಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

Key words: Support – various organizations- Karnataka bandh-tomorrow.