ವಕ್ಫ್​ ತಿದ್ದುಪಡಿ ಕಾಯ್ದೆ: ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್

ನವದೆಹಲಿ, ಸೆಪ್ಟೆಂಬರ್ 15, 2025 (www.justkannada.in):  ವಕ್ಫ್​ ತಿದ್ದುಪಡಿ ಕಾಯ್ದೆ ಕುರಿತು ಸುಪ್ರೀಂಕೋರ್ಟ್​ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.

ವಕ್ಫ್​ ಮಂಡಳಿ ಸದಸ್ಯರಾಗಲು 5 ವರ್ಷ ಇಸ್ಲಾಂ ಧರ್ಮ ಪಾಲಿಸಿರಬೇಕೆಂಬ ಷರತ್ತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.  ರಾಜ್ಯ ವಕ್ಫ್ ಮಂಡಳಿಗಳು ಮತ್ತು ಕೇಂದ್ರ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರ ಸಂಖ್ಯೆ ಮೂರು ಮೀರಬಾರದು. ಈ ನಿಟ್ಟಿನಲ್ಲಿ ಸರಿಯಾದ ನಿಯಮಗಳನ್ನು ರೂಪಿಸುವವರೆಗೆ ಈ ನಿಬಂಧನೆಯನ್ನು ಜಾರಿಗೆ ತರಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಹಾಗೆಯೇ ಸೆಕ್ಷನ್ 3(74) ಗೆ ಸಂಬಂಧಿಸಿದ ಕಂದಾಯ ದಾಖಲೆಗಳ ಒದಗಿಸುವಿಕೆಯನ್ನು ಸಹ ತಡೆಹಿಡಿಯಲಾಗಿದೆ.  ವಕ್ಫ್ ಕಾನೂನಿನ ಸೆಕ್ಷನ್ 3 ಮತ್ತು ಸೆಕ್ಷನ್ 4 ಅನ್ನು ನ್ಯಾಯಾಲಯ ನಿಷೇಧಿಸಿದ್ದು,  ವಿಚಾರಣೆಯ ನಂತರ, ಸಂಪೂರ್ಣ ಕಾನೂನನ್ನು ನಿಷೇಧಿಸುವ ಹಕ್ಕು ನಮಗಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.  ವಕ್ಫ್ ಮಂಡಳಿಯ 11 ಸದಸ್ಯರಲ್ಲಿ ಮೂರಕ್ಕಿಂತ ಹೆಚ್ಚು ಮುಸ್ಲಿಮೇತರರು ಇರಬಾರದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

Key words: Waqf Amendment Act, Supreme Court,  judgment