ಸುಪ್ರೀಂಕೋರ್ಟ್ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ, ನವೆಂಬರ್ 24,2025 (www.justkannada.in):  ಸುಪ್ರೀಂಕೋರ್ಟ್ ನ  53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರು  ಪ್ರಮಾಣ ವಚನ ಸ್ವೀಕಾರ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಿಜೆಐ ಸೂರ್ಯಕಾಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಹಿಂದಿನ ಸಿಜೆಐ ಬಿಆರ್ ಗವಾಯ್ ಅವರು ನಿನ್ನೆ ನಿವೃತ್ತರಾಗಿದ್ದು ಇಂದು  ಅವರ ಸ್ಥಾನಕ್ಕೆ ನ್ಯಾ. ಸೂರ್ಯ ಕಾಂತ್ ಅವರು ಆಯ್ಕೆಯಾಗಿದ್ದಾರೆ.

ಹರ್ಯಾಣ ಮೂಲದ ನ್ಯಾ. ಸೂರ್ಯಕಾಂತ್ ಅವರು  2004ರಲ್ಲಿ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್​ನ ಜಡ್ಜ್ ಆಗಿ ಬಡ್ತಿ ಪಡೆದು ನಂತರ, ಹಿಮಾಚಲಪ್ರದೇಶ ಹೈಕೋರ್ಟ್​ನ ಮುಖ್ಯನ್ಯಾಯಧೀಶರಾಗಿ ಸೇವೆ ಸಲ್ಲಿಸಿದರು.  ಬಳಿಕ 2019ರಲ್ಲಿ ಸುಪ್ರೀಂಕೋರ್ಟ್​ಗೆ ನ್ಯಾಯಮೂರ್ತಿಯಾಗಿ ಆಯ್ಕೆಯಾದರು. 2024ರಿಂದ ಸರ್ವೋಚ್ಚ ನ್ಯಾಯಾಲಯದ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

Key words: Justice, Suryakanth, oath, 53rd Chief Justice, Supreme Court