Thursday, July 30, 2026

BDA Apartments

Home Cinema ಏ.2 ರಂದು ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಪ್ರಶ್ನಿಸಿದ  ಅರ್ಜಿ ವಿಚಾರಣೆ

ಏ.2 ರಂದು ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಪ್ರಶ್ನಿಸಿದ  ಅರ್ಜಿ ವಿಚಾರಣೆ

 

ನವದೆಹಲಿ,ಮಾರ್ಚ್,18,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.

ನಟ ದರ್ಶನ್ ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ಏಪ್ರಿಲ್ 2 ರಂದು  ನಡೆಯಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ. ಪೊಲೀಸರು ನಟ ದರ್ಶನ್ ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಏ.2 ರಂದು ಸುಪ್ರೀಂಕೋರ್ಟ್ ನಲ್ಲಿ ಈ ಅರ್ಜಿ ವಿಚಾರಣೆ ನಡೆಯಲಿದೆ.

ಸದ್ಯ ನಟ ದರ್ಶನ್ ಡೆವಿಲ್ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದು, ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

Key words: Actor Darshan, bail, heard, Supreme Court, April 2