ಮಾನನಷ್ಟ ಪ್ರಕರಣದಲ್ಲಿ ಜೈಲು ಶಿಕ್ಷೆ ವಿಚಾರ: ರಾಹುಲ್ ಗಾಂಧಿ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್.

ನವದೆಹಲಿ,ಜುಲೈ,21,2023(www.justkannada.in): ಮಾನನಷ್ಟ ಪ್ರಕರಣದಲ್ಲಿ  ಎರಡು ವರ್ಷ ಜೈಲು ಶಿಕ್ಷೆ ಆದೇಶಕ್ಕೆ  ತಡೆ ನೀಡಲು ನಿರಾಕರಿಸಿ ಅರ್ಜಿ ವಜಾಗೊಳಿಸಿದ್ದ  ಗುಜರಾತ್​ ಹೈಕೋರ್ಟ್ ​ ತೀರ್ಪು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನ ಸುಪ್ರೀಂಕೋರ್ಟ್ ಆಗಸ್ಟ್ 4ಕ್ಕೆ ಮುಂದೂಡಿಕೆ ಮಾಡಿದೆ.

ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್​ ಕೋರ್ಟ್​​​ ರಾಹುಲ್​​ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ನೀಡಿತ್ತು, ಆದರೆ ರಾಹುಲ್​​ ಗಾಂಧಿ ಈ ಶಿಕ್ಷೆಯನ್ನು ತಡೆಯುವಂತೆ ಗುಜರಾತ್​ ಹೈಕೋರ್ಟ್​​ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿದ್ದ ಗುಜರಾತ್​ ಹೈಕೋರ್ಟ್​​ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿಯನ್ನು ಸಲ್ಲಿಸಿದ್ದರು. ಸುಪ್ರೀಂ ಅವರ ಅರ್ಜಿಯನ್ನು ವಿಚಾರಣೆ ಮಾಡುವುದಾಗಿ ಜುಲೈ 18ರಂದು ಒಪ್ಪಿಗೆ ನೀಡಿತ್ತು, ಆದರೆ ಸುಪ್ರೀಂ ಇಂದು ಈ ವಿಚಾರಣೆಯನ್ನು ಆ.4ಕ್ಕೆ ಸುಪ್ರೀಂ ಮುಂದೂಡಿದೆ.

ಪ್ರಕರಣ ಸಂಬಂಧ ಗುಜರಾತ್​​ ಸರ್ಕಾರ ಮತ್ತು ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ನೋಟಿಸ್​​ ನೀಡಿದ್ದು, 10 ದಿನದ ಒಳಗೆ ಉತ್ತರ ನೀಡುವಂತೆ ತಿಳಿಸಿದೆ.

Key words: Supreme Court -adjourned -hearing – Rahul Gandhi- appeal.