ಐದು ಮಂದಿ ಅತೃಪ್ತ ಶಾಸಕರ ಅರ್ಜಿ ವಿಚಾರಣೆಗೆ ಒಪ್ಪಿಗೆ ನೀಡಿದ ಸುಪ್ರೀಂಕೋರ್ಟ್…

ನವದೆಹಲಿ,ಜು,15,2019(www.justkannada.in):  ರಾಜೀನಾಮೆ ಅಂಗೀಕರಿಸಲು ವಿಳಂಬ ಮಾಡುತ್ತಿದ್ದಾರೆಂಬ ಆರೋಪದಲ್ಲಿ ಸ್ಪೀಕರ್ ವಿರುದ್ದ ಐದು ಮಂದಿ ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ.

ಮೈತ್ರಿ ಸರ್ಕಾರದ 10 ಮಂದಿ ಅತೃಪ್ತ ಶಾಸಕರು ಸ್ಪೀಕರ್ ವಿರುದ್ದ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ. ಈ ನಡುವೆ ಮತ್ತೆ ಐದು ಮಂದಿ ಅತೃಪ್ತ ಶಾಸಕರು ಶನಿವಾರ ಸ್ಪೀಕರ್ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್ ನ ರೋಷನ್ ಬೇಗ್, ಆನಂದ್ ಸಿಂಗ್, ಎಂಟಿಬಿ ನಾಗರಾಜ್, ಡಾ.ಕೆ ಸುಧಾಕರ್ ಮತ್ತು ಮುನಿರತ್ನ ಶನಿವಾರ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಈ ಐವರು ಶಾಸಕರ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಇನ್ನು ಮೂಲ ಅರ್ಜಿಯ ಜತೆಯಲ್ಲೇ ಈ ಅರ್ಜಿಯನ್ನ ನಾಳೆ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.

Key words: Supreme Court -agreed – hear -petition -five -dissatisfied -MLAs.