Tuesday, September 22, 2026

BDA Apartments

ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ BDA JK_Adv BDA Adv
Home Front Page ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ..

ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ..

ನವದೆಹಲಿ,ಆ,27,2019(www.justkannada.in): ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಸ್ಪೀಕರ್ ನೀಡಿದ್ದ ಆದೇಶವನ್ನ ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.

ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ 14 ಮಂದಿ ಕಾಂಗ್ರೆಸ್ ಮೂರು ಮಂದಿ ಜೆಡಿಎಸ್  ಶಾಸಕರನ್ನ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಆದೇಶ ನೀಡಿದ್ದರು. ಈ  ಆದೇಶವನ್ನ ಪ್ರಶ್ನಿಸಿ ಅನರ್ಹಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಅರ್ಜಿ ತುರ್ತು ವಿಚಾರಣೆ ನಡೆಸುವಂತೆ ಹಲವು ಬಾರಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಗೆ ಮನವಿ ಮಾಡಿದ್ದರು. ಆದರೆ ಸುಪ್ರೀಂಕೋರ್ಟ್ ಅನರ್ಹ ಶಾಸಕರ ಮನವಿ ತಿರಸ್ಕರಿಸಿತ್ತು. ಇದೀಗ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿದ್ದು, ಲೀಸ್ಟ್ ಮಾಡಿ ಅರ್ಜಿ ವಿಚಾರಣೆ ನಡೆಸುತ್ತೇವೆ ಎಂದು ಕೋರ್ಟ್ ತಿಳಿಸಿದೆ.

ನಿನ್ನೆಯಷ್ಟೆ ಸ್ಪೀಕರ್ ಅನರ್ಹತೆ ಪ್ರಶ್ನಿಸಿ ಅನರ್ಹ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಅವರು ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಪೀಠ ನಿರಾಕರಿಸಿತ್ತು.

Key words: Supreme Court -agrees –urgent- hearing –disqualified MLA’s -petition