Tuesday, August 11, 2026

BDA Apartments

Home Front Page ಮಹದಾಯಿ ನದಿ ನೀರು ಹಂಚಿಕೆ ವಿವಾದ : ಗೆಜೆಟ್ ನೋಟೀಫಿಕೇಷನ್ ಹೊರಡಿಸಲು ಕೇಂದ್ರಕ್ಕೆ ಅವಕಾಶ ನೀಡಿದ...

ಮಹದಾಯಿ ನದಿ ನೀರು ಹಂಚಿಕೆ ವಿವಾದ : ಗೆಜೆಟ್ ನೋಟೀಫಿಕೇಷನ್ ಹೊರಡಿಸಲು ಕೇಂದ್ರಕ್ಕೆ ಅವಕಾಶ ನೀಡಿದ ಸುಪ್ರೀಂಕೋರ್ಟ್…

ನವದೆಹಲಿ,ಫೆ,20,2020(www.justkannada.in)  ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ರೈತರಿಗೆ ಸಿಹಿಸುದ್ದಿ ನೀಡಿದೆ.  ಗೆಜೆಟ್ ನೋಟೀಫಿಕೇಷನ್ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೆಜೆಟ್ ನೋಟಿಫಿಕೇಷನ್ ಹೊರಡಿಸುವಂತೆ  ಸುಪ್ರೀಂಕೋರ್ಟ್  ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.  ಕೋರ್ಟ್ ಆದೇಶಕ್ಕೆ ಮಹಾರಾಷ್ಟ್ರ, ಗೋವಾ ಸಹಮತ ವ್ಯಕ್ತಪಡಿಸಿವೆ. ಮಹದಾಯಿ ವಿವಾದ ಕುರಿತು  ಜುಲೈ 15 ರಿಂದ ಮೇಲ್ಮನವಿ ಅರ್ಜಿಗಳ ನಿರಂತರ ವಿಚಾರಣೆ ನಡೆಸಿ ಸುಪ್ರೀಂಕೋರ್ಟ್ ಅಂತಿಮ ಆದೇಶ ನೀಡಲಿದೆ.

ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೆಜೆಟ್ ನೋಟಿಫಿಕೇಷನ್ ಹೊರಡಿಸುವಂತೆ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಆದರೆ ವಿವಾದ ಸುಪ್ರೀಂಕೋರ್ಟ್ ನಲ್ಲಿರುವುದರಿಂದ ಗೆಜೆಟ್ ನೋಟಿಫಿಕೇಷನ್ ಹೊರಡಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿತ್ತು.

Key words:  Supreme Court –Central government-issue mahadayi River -Water Dispute -Gazette Notification