ನವದೆಹಲಿ, ಅಕ್ಟೋಬರ್ 27,2025 (www.justkannada.in): ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನ ಸಿಜೆಐ ಬಿ.ಆರ್ ಗವಾಯಿ ಶಿಫಾರಸು ಮಾಡಿದ್ದಾರೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ನವೆಂಬರ್ 23 ರಂದು ನಿವೃತ್ತರಾಗಲಿದ್ದಾರೆ. ಸಂಜೀವ್ ಖನ್ನಾ ಅವರ ನಿವೃತ್ತಿಯ ನಂತರ ಅವರು ಬಿ.ಆರ್ ಗವಾಯಿ ಸಿಜೆಐ ಹುದ್ದೆಯನ್ನು ವಹಿಸಿಕೊಂಡಿದ್ದಾರೆ. ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಹಿರಿತನದ ಆಧಾರದ ಮೇಲೆ, ನ್ಯಾಯಮೂರ್ತಿ ಸೂರ್ಯಕಾಂತ್ ಭಾರತದ 53 ನೇ ಸಿಜೆಐ ಆಗಲಿದ್ದಾರೆ. ನ್ಯಾಯಮೂರ್ತಿ ಸೂರ್ಯಕಾಂತ್ ಸುಮಾರು 14 ತಿಂಗಳುಗಳ ಕಾಲ ಈ ಹುದ್ದೆಯಲ್ಲಿ ಸೇವೆ ಸಲ್ಲಿಸಲಿದ್ದು, ಫೆಬ್ರವರಿ 9, 2027 ರಂದು ನಿವೃತ್ತರಾಗಲಿದ್ದಾರೆ.
Key words: Supreme Court, CJI, Justice, SuryaKanth, recommends







