Sunday, September 13, 2026

BDA Apartments

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್ BDA JK_Adv BDA Adv
Home Front Page ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್

ಬೆಂಗಳೂರು ,ಡಿಸೆಂಬರ್,8,2025 (www.justkannada.in):  ವಿಧಾನಸಭಾ ಚುನಾವಣೆ ವೇಳೆ ಅಕ್ರಮ ನಡೆಸಿದ್ದಾರೆ ಎಂದು ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ  ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕೆ. ಶಂಕರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು, ನಂತರ ಹೈಕೋರ್ಟ್ ಆದೇಶವನ್ನು  ಪ್ರಶ್ನಿಸಿ ಕೆ ಶಂಕರ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್  ನ್ಯಾ.ವಿಕ್ರಮನಾಥ ನೇತೃತ್ವದ ದ್ವಿಸದಸ್ಯ ಪೀಠವು ಸಿಎಂ ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್ supreme court

ಜನತೆಗೆ ಹಲವಾರು ಗ್ಯಾರಂಟಿಗಳ ಆಮಿಷವನ್ನು ಒಡ್ಡುವ ಮೂಲಕ ಸಿದ್ದರಾಮಯ್ಯನವರು 2023ರ ಚುನಾವಣೆಯಲ್ಲಿ ಗೆದ್ದಿದ್ದಾರೆ. ಮತದಾರರಿಗೆ ಆಮಿಷ ನೀಡಿ ಮತದಾರರನ್ನು ಆಕರ್ಷಿಸುವುದು ಚುನಾವಣಾ ನಿಯಮಗಳಿಗೆ ವಿರುದ್ಧವಾದದ್ದು.  ಹೀಗಾಗಿ ಸಿದ್ದರಾಮಯ್ಯ ಅವರ ಆಯ್ಕೆಯನ್ನುಅಸಿಂಧುಗೊಳಿಸಬೇಕೆಂದು  ಕೆ.  ಶಂಕರ್ ಅವರು ತಕರಾರು ಅರ್ಜಿ ಸಲ್ಲಿಸಿದ್ದರು.

Key words: Supreme Court, notice, CM Siddaramaiah