ಪ್ರಧಾನಿಯವರಿಂದ ನೂತನ ಸಂಸತ್ ಭವನ ಉದ್ಘಾಟನೆ ಪ್ರಶ್ನಿಸಿ ಸಲ್ಲಿಸಿದ್ಧ ಪಿಐಎಲ್ ವಜಾಗೊಳಿಸಿದ ಸುಪ್ರೀಂಕೋರ್ಟ್.

ನವದೆಹಲಿ,ಮೇ,26,2023(www.justkannada.in): ಪ್ರಧಾನಿಯವರಿಂದ ನೂತನ ಸಂಸತ್ ಭವನ ಉದ್ಘಾಟನೆ ಪ್ರಶ್ನಿಸಿ ಸಲ್ಲಿಸಿದ್ಧ ಪಿಐಎಲ್ ಅನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ದೆಹಲಿಯಲ್ಲಿನ ನೂತನ ಸಂಸತ್ ಭವನವನ್ನ ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ. ಈ ನಡುವೆ ಪ್ರಧಾನಿಯವರಿಂದ ನೂತನ ಸಂಸತ್ ಭವನ ಉದ್ಘಾಟನೆ ಪ್ರಶ್ನಿಸಿ ವಕೀಲ ಜಯಾ ಸುಕಿನ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಆದರೆ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲ್ಲ. ಈ ವಿಷಯಗಳನ್ನು ಪರಿಶೀಲಿಸುವುದು ನ್ಯಾಯಾಲಯದ ಕಾರ್ಯವಲ್ಲ  ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್  ಪಿಐಎಲ್ ಅನ್ನು ವಜಾಗೊಳಿಸಿದೆ.

Key words:  Supreme Court- dismissed – PIL -PM – inauguration – new- Parliament House.