ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಧಾರವಾಡಕ್ಕೆ ತೆರಳದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ ಸುಪ್ರೀಂಕೋರ್ಟ್.

ನವದೆಹಲಿ,ಆಗಸ್ಟ್,11,2021(www.justkannada.in):  ಜಿ.ಪಂ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಧಾರವಾಡಕ್ಕೆ ತೆರಳದಂತೆ ಷರತ್ತು ವಿಧಿಸಿ ಸುಪ್ರೀಂಕೋರ್ಟ್  ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಕಳೆದ 9 ತಿಂಗಳಿನಿಂದ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೊನೆಗೂ ಜಾಮೀನು ಸಿಕ್ಕಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ , ಹೈಕೋರ್ಟ್ ನಲ್ಲಿ ವಿಚಾರಣೆ ಬಾಕಿ ಇದೆ ಎಂಬುದಾಗಿ ಕರ್ನಾಟಕದ ಪರ ವಕೀಲ ನಟರಾಜ್ ಸುಪ್ರೀಂ ಕೋರ್ಟ್ ನ್ಯಾಯಪೀಠದ ಗಮನ ತಂದರು. ಈ ವೇಳೆ ಹೈಕೋರ್ಟ್ ಗೆ ಎರಡು ತಿಂಗಳ ಒಳಗಾಗಿ ಪ್ರಕರಣ ವಿಚಾರಣೆ ನಡೆಸಬೇಕು ಎಂಬುದಾಗಿ ನಿರ್ದೇಶಿಸಿತು.

ಈ ಬಳಿಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಗೆ, ಧಾರವಾಡ ಜಿಲ್ಲಾ ವ್ಯಾಪ್ತಿ ಪ್ರವೇಶಿಸದಂತೆ ಷರತ್ತು ವಿಧಿಸಿ, ಸುಪ್ರೀಂ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಕಳೆದ ಜುಲೈ.27ರಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.

ENGLISH SUMMARY…

Former Minister Vinay Kulkarni gets conditional bail from SC
New Delhi, August 11, 2021 (www.justkannada.in): The Hon’ble Supreme Court has granted conditional bail to former Minister Vinay Kulkarni, who is facing charges in the ZP member Yogeesh Gowda murder case. However, the court has restricted him from visiting Dharwad.
The former Minister, who is in jail for the last nine months, has been successful in getting bail at last. The Hon’ble Supreme Court granted the bail after hearing the appeal submitted by the former Minister’s advocate. However, advocate Nataraj who is representing the Karnataka Government drew the attention of the Hon’ble Court stating that the hearing, in this case, is still pending in the High Court of Karnataka. The Supreme Court also directed the High Court to complete the hearing within two months.
Following this, the former Minister was given bail restricting him from visiting Dharwad. Thus, Vinay Kulkarni who was at the Hindalga Jail in Belagavil since July 27, 2021, has been given a huge relief.
Keywords: Former Minister Vinay Kulkarni/ charges/ Hindalga Jail/ Belagavi/ conditional bail/ Supreme Court/ High Court

Key words: Supreme Court -grants -bail – former minister -Vinay Kulkarni