ಕೊರೊನಾ ಭೀತಿ: ವಿಚಾರಣಾಧೀನ ಕೈದಿಗಳಿಗೆ ರಜೆ ನೀಡುವಂತೆ ಸುಪ್ರೀಂಕೋರ್ಟ್ ಆದೇಶ

ನವದೆಹಲಿ, ಮಾರ್ಚ್ 24, 2020 (www.justkannada.in): ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಇದೀಗ ಕೊರೊನಾ ವೈರಸ್ ಭೀತಿಯಿಂದ ಜೈಲುಗಳಲ್ಲಿರುವ ಕೈದಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ವಿಚಾರಣಾಧೀನ ಕೈದಿಗಳಿಗೆ ರಜೆ ನೀಡುವಂತೆ ಸುಪ್ರೀಂಕೋರ್ಟ್ ಮಹತ್ವದ ಆಧೇಶ ನೀಡಿದೆ.

ದೇಶದ ಜೈಲುಗಳಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ರಜೆ ನೀಡುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಬೆ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಸ್ಥರಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ.

ಜೈಲುಗಳ ಸೆಲ್ ಗಳಲ್ಲಿ ಹೆಚ್ಚು ಜನ ಸೇರುವುದರಿಂದ ಕೊರೊನಾ ವೈರಸ್ ಹರಡಬಹುದು ಎಂಬ ಕಾರಣಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಕೈದಿಗಳಿಗೆ ರಜೆ ನೀಡಲು ಸೂಚನೆ ನೀಡಲಾಗಿದೆ.