Thursday, September 17, 2026

BDA Apartments

ಕೇಂದ್ರ ಸರ್ಕಾರಕ್ಕೆ ಭಾರಿ ಹಿನ್ನಡೆ: ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿ ಹಿಡಿದ...
Home Front Page ಕೇಂದ್ರ ಸರ್ಕಾರಕ್ಕೆ ಭಾರಿ ಹಿನ್ನಡೆ: ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್…

ಕೇಂದ್ರ ಸರ್ಕಾರಕ್ಕೆ ಭಾರಿ ಹಿನ್ನಡೆ: ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್…

ನವದೆಹಲಿ,ಮೇ,5,2021(www.justkannada.in): ಕರ್ನಾಟಕಕ್ಕೆ ಆಕ್ಸಿಜನ್ ಪ್ರಮಾಣ ಹೆಚ್ಚಳ ಮಾಡುವಂತೆ ಹೈಕೋರ್ಟ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೊರ್ಟ್ ಮೊರೆಹೊಗಿದ್ದ ಕೇಂದ್ರ ಸರ್ಕಾರಕ್ಕೆ ಭಾರಿ ಮುಖಭಂಗವಾಗಿದೆ.jk

ಕೇಂದ್ರ ಸರ್ಕಾರದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿಹಿಡಿದಿದೆ. ಕರ್ನಾಟಕಕಕ್ಕೆ 1200 ಮೆಟ್ರಿಕ್ ಟನ್ ಆಕ್ಸಿಜನ್ ನೀಡಬೇಕು. ಕರ್ನಾಟಕದ ಜನತೆ ತತ್ತರಿಸುವಂತೆ ಮಾಡುವುದಿಲ್ಲ. ಹೈಕೋರ್ಟ್ ಆದೇಶದಲ್ಲಿ ನಾವು ಮಧ್ಯ ಪ್ರವೇಶಿಸಲ್ಲ. ಸೂಕ್ತ ಸಮಯದಲ್ಲಿ ಮಧ್ಯಪ್ರವೇಶಿಸುತ್ತೇವೆ. ಹೈಕೋರ್ಟ್ ಆದೇಶ ಸರಿಯಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

 ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಿ ನೀಡಬೇಕು ಎಂದು   ಕರ್ನಾಟಕ ಹೈಕೋರ್ಟ್  ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು. ಆದರೆ ಈ ಆದೇಶದ ವಿರುದ್ದ ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್ ನಲ್ಲಿ  ಅರ್ಜಿ ಸಲ್ಲಿಸಿತ್ತು.

Key words: Supreme Court- upholding –Karnataka- High Court –order-central Government-oxigen