Thursday, October 29, 2026

Dasara Wishes

Just Kannada DasraWishes_JK DasraWishes JK
Happy Dasara
Home Crime ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ

ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ

ಬೆಂಗಳೂರು, ಜುಲೈ,3,2024 (www.justkannada.in):  ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ಪೊಲೀಸರು ಸೂರಜ್ ರೇವಣ್ಣರನ್ನ ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಿದ್ದಾಗ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದರು.ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ suraj

ನಂತರ  ಪ್ರಕರಣದ ಬಗ್ಗೆ ತನಿಖೆ ನಡೆಸಲು ಆರೋಪಿ ಸೂರಜ್ ರೇವಣ್ಣನನ್ನು ತಮ್ಮ ವಶಕ್ಕೆ ನೀಡುವಂತೆ ಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್, ನ್ಯಾಯಾಂಗ ಬಂಧನದಲ್ಲಿದ್ದ ಸೂರಜ್ ರೇವಣ್ಣನನ್ನು ಜುಲೈ 3ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು.

ಇದೀಗ ಇಂದು ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಸೂರಜ್​ ರೇವಣ್ಣರನ್ನು ಕೋರ್ಟ್​ಗೆ ಹಾಜರುಪಡಿಸಿದ್ದರು.  ಇದೀಗ ಕೋರ್ಟ್​ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Key words: Suraj Revanna, judicial custody, again