ಸೂರಜ್‌ ಮಹಾನ್‌ ಧೈವ ಭಕ್ತ,  ಬೇಗ ಹೊರ ಬರ್ತಾನೆ : ಮಾಜಿ ಸಚಿವ ಎಚ್.ಡಿ.ರೇವಣ್ಣ

Suraj Revanna is a great devotee of dhaiva, will come out soon: Former Minister HD Revanna

 

ಮೈಸೂರು, ಜು.02,2024: (www.justkannada.in news) ನಮಗೆ ಸಧ್ಯಕ್ಕೆ ದೇವರು ಬಿಟ್ಟರೆ ಇನ್ಯಾರು ಗತಿ  ಎಂದು ಮಾತು ಆರಂಭಿಸಿದ ರೇವಣ್ಣ. ನಾನು ಸಧ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೋಟ್ಟ ಅಂತಾ ಹೇಳುತ್ತಾರೆ‌ ಹೀಗಾಗಿ ನಾನು ಹೋಗಲ್ಲ ಎಂದರು.

ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಚಿವ ಹೆಚ್ ಡಿ ರೇವಣ್ಣ  ಬಳಿಕ ಮಾಧ್ಯಮಗಳ ಜತೆ ಮಾತನಾಡಿದರು.

ನಿನ್ನೆ ನನ್ನ ಪತ್ನಿ ಭವಾನಿ ಮಕ್ಕಳ ಭೇಟಿಗೆ ಹೋಗಿದ್ದಾರೆ, ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ. ಸೂರಜ್ ರೇವಣ್ಣ ಮಹಾನ್ ದೈವ ಭಕ್ತ. ಅವ್ನು ಬಹಳ ಬೇಗ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ.

ಉಳಿದ ಯಾವ ವಿಚಾರಗಳ ಬಗ್ಗೆಯೂ ನಾನು ಮಾತನಾಡೋಲ್ಲ. ಎಲ್ಲವೂ ನ್ಯಾಯಾಲಯದ ಮುಂದೆ ಇವೆ. ಎಲ್ಲವೂ ಮುಗಿಯಲಿ, ಆಮೇಲೆ ಎಲ್ಲವನ್ನೂ ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ. ಎಂಥೆಂತವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ.

ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ‌.  ಎಲ್ಲದಕ್ಕೂ ಕಾಲದಲ್ಲಿ ಉತ್ತರ ಸಿಗುತ್ತದೆ. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ, ಮೈಸೂರಿನಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿಕೆ.

ಲಾಸ್ಟ್‌ ಲೈನ್‌ :

ಒಂದೆಡೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಎಚ್.ಡಿ.ರೇವಣ್ಣ ರ  ಹಿರಿಯ ಮಗ ಪ್ರಜ್ವಲ್ ಜೈಲು ಪಾಲಾಗಿದ್ದರೆ, ಅಸಹಜ ಲೈಂಗಿಕ (ಸಲಿಂಗಿ) ಆರೋಪದ ಮೇಲೆ ಮತ್ತೊಬ್ಬ ಮಗ ಸೂರಜ್‌ ಸಹ ಜೈಲು ಪಾಲಾಗಿದ್ದಾನೆ. ಈ ಬೆಳವಣಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಆಘಾತವನ್ನುಂಟು  ಮಾಡಿದೆ.

key words: Suraj Revanna, is a great devotee of dhaiva, will come out soon, Former Minister, HD Revanna