ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ, ಕಲ್ಲು ತೂರಾಟ.

ಯಾದಗಿರಿ,ಮೇ,7,2024 (www.justkannada.in): ಮತಗಟ್ಟೆ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದು, ಕಲ್ಲು ತೂರಾಟವಾಗಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕು ಬ್ಯಾದಪುರದಲ್ಲಿ ನಡೆದಿದೆ.

ಇಂದು ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದ್ದು ಬ್ಯಾದಪುರ ಗ್ರಾಮದಲ್ಲಿ ಮತಗಟ್ಟೆ ಬಳಿ ಕ್ಷುಲ್ಲಕ ಕಾರಣಕ್ಕೆ  ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು, ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಗಲಾಟೆ ತಾರಕಕ್ಕೇರಿ  ಪರಸ್ಪರ ಕಲ್ಲು ತೂರಾಟವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಇನ್ನು ಘಟನೆಯಲ್ಲಿ ಗಾಯಗೊಂಡವರನ್ನ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

Key words: surapura, By-election, bjp, congress, fight