ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದು.

ಮಂಗಳೂರು,ನವೆಂಬರ್,14,2022(www.justkannada.in):  ಮಂಗಳೂರು ಹೊರವಲಯದಲ್ಲಿರುವ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರವನ್ನ ರದ್ದುಗೊಳಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದಿದ್ದಾರೆ.

60 ಕಿ.ಮೀ ಅಂತರದಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಇರಬಾರದು ಎಂಬುದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮವಿದೆ.  ಈ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ ನಲ್ಲಿರುವ  ಟೋಲ್‍ಗೇಟ್ ಅಕ್ರಮ ಎಂಬುದು ಟೋಲ್ ವಿರೋಧಿ ಹೋರಾಟಗಾರು ಅಕ್ಟೋಬರ್ 28 ರಿಂದ  ಅನಿರ್ಧಿಷ್ಟಾವಧಿ ಧರಣಿ ಕೈಗೊಂಡಿದ್ದರು. ಕಳೆದ ವಾರ ಟೋಲ್ ಗೇಟ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.

2015ರಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುರತ್ಕಲ್ ಟೋಲ್ ಗೇಟ್ ಆರಂಭಗೊಂಡಿತ್ತು. ಅಕ್ರಮವಾಗಿ ಟೋಲ್ ಸಂಗ್ರಹ ಮಾಡುತ್ತಿದ್ದ ಆರೋಪ ಹಿನ್ನೆಲೆ ಟೋಲ್ ಸಂಗ್ರಹ ರದ್ಧು ಮಾಡುವಂತೆ ಆಗ್ರಹಿಸಿದ್ದರು.

Key words: Suratkal -toll -collection –center- cancelled.