ಉಪಚುನಾವಣೆ: ಬಿಜೆಪಿಯಿಂದ ರಾಜುಗೌಡರಿಗೆ ಟಿಕೆಟ್.

ಬೆಂಗಳೂರು, ಮಾರ್ಚ್​ 26,2024 (www.justkannada.in):  ಕಾಂಗ್ರೆಸ್​  ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದಿಂದ  ತೆರವಾಗಿರುವ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7 ರಂದು ಉಪ ಚುನಾವಣೆ ನಡೆಯಲಿದ್ದು, ಬಿಜೆಪಿಯಿಂದ ರಾಜುಗೌಡರಿಗೆ ಟಿಕೆಟ್ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ವಿಧಾನಸಭೆಯಲ್ಲಿ ಸೋತಿದ್ದ ರಾಜುಗೌಡ ಅವರಿಗೆ ಮತ್ತೆ ಬಿಜೆಪಿ ಮಣೆ ಹಾಕಿದೆ. ಇನ್ನು ಕಾಂಗ್ರೆಸ್​ ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಈಗಾಗಲೆ ಟಿಕೆಟ್ ನೀಡಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ರಾಜಾ ವೆಂಕಟಪ್ಪ ನಾಯಕ 25 ಸಾವಿರ ಮತಕ್ಕೂ ಹೆಚ್ಚು ಅಂತರದಿಂದ ಗೆಲುವು ಸಾಧಿಸಿದ್ದರು.

Key words: Surpura,By-election,Raju Gowda